BengaluruDistrictsPolitics

ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ; ಶೀಘ್ರದಲ್ಲೇ ತೀರ್ಮಾನಿಸ್ತೇವೆ ಎಂದು ಹೆಚ್‌ಡಿಕೆ

ರಾಮನಗರ; ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಅವರು ಕೇಳಿದ್ದಾರೆ. ಹೀಗಾಗಿ ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇವೆಂದು ಜೆಡಿಎಸ್‌ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡ ಎಂದಿದ್ದಾರೆ. ಕರೆಯದೇ ಇರುವವರ ಮನೆಯ ಬಾಗಿಲಿಗೆ ಹೋಗಲು ಆಗದು ಎಂದಿದ್ದಾರೆ.


ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರವಾಗಿ ಮಾತನಾಡಲು ದೇವೇಗೌಡರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದರು. ಈ ವೇಳೆ ಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಮಾತುಕತೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಗೌಡರು ದೆಹಲಿಯಿಂದ ಬಂದ ಮೇಲೆ ಈ ಬಗ್ಗೆ ಮಾತುಕತೆ ನಡೆಸುತ್ತೇನೆ. ಸದ್ಯದಲ್ಲೇ ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Share Post