BengaluruCrimeHealth

ಮೆಟ್ರೋದಲ್ಲಿ ಪ್ರಯಾಣಿಕ ಸಾವು; ಮೆಟ್ರೋ ಸಿಬ್ಬಂದಿಯ ನಿರ್ಲಕ್ಷ್ಯ ಆರೋಪ

ಬೆಂಗಳೂರು; ಬೆಂಗಳೂರನಲ್ಲಿ ನಮ್ಮ ಮೆಟ್ರೋದಿಂದ ಹಲವಾರು ಅವಾಂತರಗಳು ನಡೆಯುತ್ತಲೇ ಇರುತ್ತವೆ. ಇದೀಗ ಮೆಟ್ರೋದಲ್ಲಿ ಪ್ರಯಾಣಿಸುವಾಗ ಯಾರಾದರೂ ಅನಾರೋಗ್ಯಕ್ಕೀಡಾದರೆ ಅವರಿಗೆ ತಕ್ಷಣ ವೈದ್ಯಕೀಯ ನೆರವು ಸಿಗೋದಿಲ್ಲ ಅನ್ನೋದು ಸಾಬೀತಾಗಿದೆ. ಯಾಕಂದ್ರೆ ಸೂಕ್ತ ಸಮಯದಲ್ಲಿ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗದ ಕಾರಣ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಅರವತ್ತೇಳು ವರ್ಷದ ತಿಮ್ಮೇಗೌಡ ಎಂಬುವವರು ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಮೆಟ್ರೋ ರೈಲು ಹತ್ತಿದ್ದಾರೆ. ಸ್ವಾಮಿ ವಿವೇಕಾನಂದ ನಿಲ್ದಾಣ ತಲುಪುವ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆದರೂ ಯಾರೂ ಅವರ ಸಹಾಯಕಕ್ಕೆ ಬಂದಿಲ್ಲ. ರೈಲು ಎಂಜಿ ರಸ್ತೆ ನಿಲ್ದಾಣಕ್ಕೆ ಬಂದ ಮೇಲೆ ಸಾರ್ವಜನಿಕರೇ ತಿಮ್ಮೇಗೌಡ ಅವರನ್ನು ಮೆಟ್ರೋದಿಂದ ಇಳಿಸಿದ್ದಾರೆ. ಫ್ಲಾಟ್‌ ಫಾರ್ಮ್‌ ಮೇಲೆ ಕೂರಿಸಿದ್ದಾರೆ. ಆದ್ರೆ, ಅಲ್ಲಿಂದ ಹದಿನಾಲ್ಕು ನಿಮಿಷವಾದ ಮೇಲೆ ಮೆಟ್ರೋ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ತಿಮ್ಮೇಗೌಡ ಅವರನ್ನು ಇನ್‌ಫ್ಯಾಂಟ್ರಿ ರಸ್ತೆಯ ಸ್ಪರ್ಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಾರದ ಕಾರಣ ತಿಮ್ಮೇಗೌಡರು ಸಾವನ್ನಪ್ಪಿದ್ದಾರೆ.

ಈ ಹಿನ್ನೆಲೆಯಲ್ಲಿ ಮೆಟ್ರೋ ಅಧಿಕಾರಿಗಳ ವಿರುದ್ಧ ಬೈಯಪ್ಪನಹಳ್ಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share Post