Bengaluru

ಸದನದಲ್ಲೂ ಮಾರ್ದನಿಸಿತು ಪೇಸಿಎಂ ಗದ್ದಲ; ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು; ʻಪೇಸಿಎಂ’ ಪ್ರಕರಣ ಸದನದಲ್ಲೂ ಸದ್ದು ಮಾಡಿತು. ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟದ ಇಬ್ಬರು ಕಾರ್ಯಕರ್ತರನ್ನು ಬಂಧಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್‌ನಲ್ಲಿ ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು. ಶೇ40ರ ಸರ್ಕಾರ ಎನ್ನುವ ಮಾಸ್ಕ್ ಗಳನ್ನು ಧರಿಸಿದ ಸದಸ್ಯರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸರ್ಕಾರ ಏಕಪಕ್ಷೀಯವಾಗಿ ನಡೆದುಕೊಂಡಿದೆ. ಬಿಜೆಪಿಯವರು ಸಹ ಕಾಂಗ್ರೆಸ್ ನಾಯಕರ ಪೋಸ್ಟರ್ ಗಳನ್ನು ಅಂಟಿಸಿದ್ದರು. ಆದರೆ ಅವರನ್ನು ಬಂಧಿಸಿಲ್ಲ. ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದರು. ಬಿಜೆಪಿ ಸದಸ್ಯರು ಧರಣಿಗೆ ಆಕ್ಷೇಪ ವ್ಯಕ್ತಪಡಿಸಿ, ಕಾಂಗ್ರೆಸ್ ನವರು ಹೇಡಿಗಳು ಎಂದು ಟೀಕಿಸಿದರು.

Share Post