ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಫೋಟೋ ವೈರಲ್; 11ಕ್ಕೆ ಮೋದಿ ಉದ್ಘಾಟನೆ
ಬೆಂಗಳೂರು; ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನ್ನು 5000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇದರ ಉದ್ಘಾಟನೆಗೆ ಎರಡು ದಿನ ಬಾಕಿ ಇದೆ. ಈಗ ಅದರ ಫೋಟೋಗಳನ್ನು ರಿಲೀಸ್ ಮಾಡಲಾಗಿದೆ. ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಅದ್ದೂರಿ ಟರ್ಮಿನಲ್ -2ನ್ನು ಉದ್ಘಾಟನೆ ಮಾಡಲಿದ್ದು, ಅದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಈ ಹೊಸ ಟರ್ಮಿನಲ್ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ವಾರ್ಷಿಕವಾಗಿ 2.5 ಕೋಟಿಯಿಂದ 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗುತ್ತಿದೆ. ಟರ್ಮಿನಲ್-2 ಉದ್ಘಾಟನೆಯಾದ ಬಳಿಕ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ ದ್ವಿಗುಣವಾಗಲಿದ್ದು, ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.