BengaluruHealth

ಗ್ಯಾಸ್‌ ಗೀಸರ್‌ನಿಂದ ವಿಷಾನಿಲ ಸೋರಿಕೆ; ಪ್ರಜ್ಞೆ ತಪ್ಪಿ ಯುವತಿ ಸಾವು!

ಬೆಂಗಳೂರು; ಗ್ಯಾಸ್‌ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ಕೆಲ ತಿಂಗಳ ಹಿಂದೆ ವಿವಾಹವಾಗಬೇಕಿದ್ದ ಜೋಡಿ ಸಾವನ್ನಪ್ಪಿತ್ತು. ಇದೀಗ ಇಂತಹದ್ದೇ ಒಂದು ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯೊಬ್ಬಳಿ ಗ್ಯಾಸ್‌ ಗೀಸರ್‌ನಿಂದ ವಿಷಾನಿಲ ಸೋರಿಕೆಯಿಂದ ಪ್ರಜ್ಞೆ ತಪ್ಪಿ ಸಾವನ್ನಪ್ಪಿದ್ದಾಳೆ.

23 ವರ್ಷದ ರಾಜೇಶ್ವರಿ ಎಂಬಾಕೆಯೇ ಸಾವನ್ನಪ್ಪಿದ ಯುವತಿ. ಕಾಮಾಕ್ಷಿಪಾಳ್ಯದ ಮೀನಾಕ್ಷಿ ನಗರದಲ್ಲಿ ಈ ದುರ್ಘಟನೆ ನಡೆದಿದೆ. ರಾಜೇಶ್ವರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಣ್ಣನ ಮದುವೆ ಇದ್ದಿದ್ದರಿಂದ ಕೆಲಸಕ್ಕೆ ರಜೆ ಹಾಕಿದ್ದಳು. ಸ್ನಾನ ಮಾಡಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ವಿಷ ತಿಳಿದು ಕುಟುಂಬದವರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ರಾಜೇಶ್ವರಿ ಪ್ರಾಣ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

 

Share Post