ಪೊಲೀಸರ ಮೇಲೆ ಇಟ್ಟಿಗೆಯಿಂದ ದಾಳಿ; ಆರೋಪಿ ಕಾಲಿಗೆ ಗುಂಡು
ಬೆಂಗಳೂರು; ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ದರೋಡೆಕೋರನ ಮೇಲೆ ನೆಲಮಂಗಲ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್‌ಶಿಫ್ಟ್ ಯೋಗಿ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ, ಆತನನ್ನು ಸೆರೆ ಹಿಡಿದಿದ್ದಾರೆ. ಸದ್ಯ ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೊದಲಿಗೆ ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿ ಆರೋಪಿಗೆ ಎಚ್ಚರಿಕೆ ನೀಡಿದರು. ಆದ್ರೆ ಆತ ಅದಕ್ಕೆ ಹೆದರದಿದ್ದಾಗ, ಕಾಲಿಗೆ ಗುಂಡು ಹಾರಿಸಿದ್ದಾರೆ. ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಆರೋಪಿ ಕುಖ್ಯಾತ ದರೋಡೆಕೋರನಾಗಿದ್ದು, ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಘಟನೆಯಲ್ಲಿ ಕಾನ್ಸ್‌ಟೇಬಲ್ ಹನುಮಂತ ಹಿಪ್ಪರಗಿ ಅವರ ಕೈಗಳಿಗೆ ಗಾಯವಾಯಿತು.