BengaluruPolitics

ವಿಚಾರಣೆ ಮಧ್ಯೆಯೇ ಡಿಕೆಶಿ ಟ್ವೀಟ್‌; ಕದನ ರಾಜಕೀಯ ರಣರಂಗದಲ್ಲೇ ನಡೆಸಬೇಕು..!

ಬೆಂಗಳೂರು; ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜಾರಿ ನಿರ್ದೇಶನಾಯದ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ. ಇದರ ನಡುವೆ ಅವರು ಒಂದು ಟ್ವೀಟ್‌ ಮಾಡಿದ್ದಾರೆ. ಅದರಲ್ಲಿ ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು ಎಂದು ಹೇಳಿದ್ದಾರೆ.

ʻರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ಇ.ಡಿ ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರಿವಾಗಬೇಕಿದೆ’ ಹೀಗಂತ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ.

Share Post