ಅಕ್ಕಿ ವಿತರಣೆಯಲ್ಲಿ ರಾಜಕೀಯ ಸರಿಯಲ್ಲ; ಸಂಸದ ಡಿ.ಕೆ.ಸುರೇಶ್
ಬೆಂಗಳೂರು; ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಕೇಂದ್ರ ಸರ್ಕಾರದ ಮಲತಾಯಿ ದೋರಣೆಯಲ್ಲಿ ವಿರೋಧಿಸಿದ್ದಾರೆ.
ನಾವು ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ ನೀಡುತ್ತೇವೆ ಎಂದು ಹೇಳುತ್ತಿದ್ದೇವೆ. ಆದರೂ ರಾಜಕೀಯ ಕಾರಣದಿಂದ ಕೇಂದ್ರ ಸರ್ಕಾರ ಅಕ್ಕಿ ನೀಡೋದಿಲ್ಲ ಎಂದು ಹೇಳುತ್ತಿದೆ. ಅಕ್ಕಿ ದಾಸ್ತಾನಿದ್ದರೂ ಕೂಡಾ ಕೇಂದ್ರ ಸರ್ಕಾರ ಅಕ್ಕಿ ನೀಡೋದಕ್ಕೆ ನಿರಾಕರಿಸಿದೆ. ಇದು ಸರಿಯಾದ ಕ್ರಮವಲ್ಲ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.