ಪ್ರಜ್ವಲ್ ರೇವಣ್ಣ ಸಂಸತ್ ಸ್ಥಾನದಿಂದ ಅನರ್ಹ; ಹೈಕೋರ್ಟ್ ಶಾಕಿಂಗ್ ಆದೇಶ
ಬೆಂಗಳೂರು; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.
ಎ ಮಂಜು, ದೇವರಾಜೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ರೇವಣ್ಣ ಅವರ ಸಂಸತ್ ಸ್ಥಾನವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಸೇರಿದಂತೆ ಹಲವು ವಿಚಾರವಾಗಿ ಪಜ್ವಲ್ ಅವರು ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರನ್ನು ಅನರ್ಹ ಮಾಡುವಂತೆ ಪ್ರತಿಸ್ಪರ್ಧಿಗಳು ಕೋರ್ಟ್ ಮೊರೆ ಹೋಗಿದ್ದರು.
ಪ್ರಜ್ವಲ್ ರೇವಣ್ಣ ಅವರಿಗೆ ಮೇಲ್ನವಿ ಸಲ್ಲಿಸಲು ಅವಕಾಶವಿದೆ. ಮೇಲ್ಮನವಿ ನಂತರ ಕೋರ್ಟ್, ಈಗಿನ ಆದೇಶಕ್ಕೆ ತಡೆ ಕೊಟ್ಟರೆ ಮಾತ್ರ ಮುಂಬರುವ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆಗೆ ಅವಕಾಶವಿದೆ. ಇಲ್ಲದಿದ್ದರೆ ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.