ಸಂಸತ್ ಅಸಿಂಧು ಆದೇಶಕ್ಕೆ ತಡೆಕೋರಿ ಪ್ರಜ್ವಲ್ ರೇವಣ್ಣ ಮೇಲ್ಮನವಿ
ಬೆಂಗಳೂರು; ಚುನಾವಣಾ ಆಯೋಗ ತಪ್ಪು ಆಸ್ತಿ ವಿವರ ಸಲ್ಲಿಸಿದ್ದಾರೆಂಬ ಕಾರಣಕ್ಕೆ ರಾಜ್ಯ ಹೈಕೋರ್ಟ್, ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಪ್ರಜ್ವಲ್ ರೇವಣ್ಣ ಅವರು ಈ ಆದೇಶಕ್ಕೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ ಮೇಲ್ಮನವಿ ಸಲ್ಲಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವವರೆಗೂ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಪ್ರಜ್ವಲ್ ರೇವಣ್ಣ ಅವರ ಸಂಸತ್ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.