BengaluruPolitics

ಪ್ರತಾಪ ಸಿಂಹಗೆ ರಾಜಕೀಯ ಪ್ರಬುದ್ಧತೆ ಇಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಚುನಾವಣೆ ಸಮಯದಲ್ಲಿ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ ಜೊತೆ ಹೊಂದಾಣಿಕೆ ರಾಜಕೀಯ ಮಾಡಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ ಜೊತೆ ಬಿಜೆಪಿ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದರೆ ಅದನ್ನು ಬಹಿರಂಗ ಮಾಡಲಿ ಎಂದು ಆಗ್ರಹಿಸಿದರು.

ಯಾರು ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು ಅನ್ನೋದನ್ನು ಬಹಿರಂಗ ಮಾಡಲಿ. ಅದು ಬಿಟ್ಟು ಸುಮ್ಮನೆ ಮಾತನಾಡುವುದು ಸರಿಯಲ್ಲ. ಸಂಸದ ಪ್ರತಾಪ ಸಿಂಹಗೆ ರಾಜಕೀಯ ಪ್ರಬುದ್ಧತೆ ಇಲ್ಲ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Share Post