ಪ್ರವೀಣ್ ಹತ್ಯೆ ಪ್ರಕರಣ; ಸಿಎಂ ನೇತೃತ್ವದಲ್ಲಿ ತುರ್ತು ಸಭೆ – ಎನ್‌ಐಎ ತನಿಖೆಗೆ ಕೊಡ್ತಾರಾ..?
ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದರು. ದಕ್ಷಿಣ ಜಿಲ್ಲೆ ಹಾಗೂ ಸುಳ್ಯ, ಪುತ್ತೂರಿನಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ..? ಎಂಬುದರ ಬಗ್ಗೆ ಸಿಎಂ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿ.ಟಿ.ರವಿ ಪಾಲ್ಗೊಂಡಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದೆಯಾ..?, ಪೊಲೀಸರ ತನಿಖೆ ಎಲ್ಲಿಯವರೆಗೆ ಬಂದಿದೆ..? ಎಂಬುದರ ಕುರಿತು ಕೂಡಾ ಗೃಹ ಸಚಿವರಿಂದ ಸಿಎಂ ಮಾಹಿತಿ ಪಡೆದುಕೊಂಡರು. ಈ ಪ್ರಕರಣವನ್ನು ಎನ್‌ಐಎ ಕೊಡಲು ನಾವು ಸಿದ್ಧರಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೆಂದ್ರ ಹೇಳಿದ್ರು.