ಪರಿಶೀಲನೆ ಹೆಸರಲ್ಲಿ ವಾಹನಗಳನ್ನು ತಡೆಯಬೇಡಿ; ಪ್ರವೀಣ್ ಸೂದ್
ಬೆಂಗಳೂರು; ದಾಖಲಾತಿ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ತಡೆಯಬಾರದು ಎಂದು ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲನೆ ನಡೆಸುವ ಪೊಲೀಸರ ಕ್ರಮದ’ ಕುರಿತು ಟ್ವಿಟರ್ ಬಳಕೆದಾರರೊಬ್ಬರು ಪ್ರಸ್ತಾಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಹಿಂದೆ ಸಂಚಾರ ವಿಭಾಗದ ಎಸಿಪಿಯಾಗಿದ್ದ ಪ್ರವೀಣ್ ಸೂದ್ ‘ದಾಖಲೆಗಳ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ವಾಹನಗಳನ್ನು ತಡೆದು ನಿಲ್ಲಿಸುವುದಕ್ಕೆ ಬ್ರೇಕ್ ಹಾಕಿದ್ದರು. ಈಗ ಡಿಜಿ, ಐಜಿಪಿಯಾಗಿರುವ ಅವರಿಂದ ಮತ್ತೊಮ್ಮೆ ಅದೇ ನಿಯಮ ನಿರೀಕ್ಷಿಸಬಹುದೇ’ ಟ್ವೀಟ್ ಮಾಡಲಾಗಿತ್ತು.
ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಸೂದ್ ‘ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ತಡೆಯದಂತೆ’ ಸೂಚಿಸಿದ್ದೇನೆ. ಕೇವಲ ಡ್ರಂಕ್ ಆ್ಯಂಡ್ ಡ್ರೈವ್ ಪರಿಶೀಲಿಸಬಹುದು ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರಿಗೆ ಟ್ಯಾಗ್ ಮಾಡುವ ಮೂಲಕ ಸೂಚಿಸಿದ್ದಾರೆ.