Bengaluru

ರೈಲು ನಿಲ್ದಾಣ ಕೊಠಡಿಯಲ್ಲಿ ಪ್ರಾರ್ಥನೆ; ಹಿಂದೂ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಐದನೇ ಪ್ಲಾಟ್‌ ಫಾರ್ಮ್‌ನಲ್ಲಿರುವ ಪ್ರಯಾಣಿಕರ ತಂಗುದಾಣದಲ್ಲಿ ಅಕ್ರಮವಾಗಿ ಪ್ರಾರ್ಥನೆ ನಡೆಸಲಾಗುತ್ತಿದೆ ಎಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದರ ಬೆನ್ನು ಹತ್ತಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಸ್ಥಳಕ್ಕೆ ಬಂದು ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ರೈಲು ನಿಲ್ದಾಣದಲ್ಲಿ ಪ್ರಾರ್ಥನೆ ಮಾಡಲು ಹೇಗೆ ಅವಕಾಶ ಕೊಟ್ಟಿದ್ದೀರಿ ಎಂದು ರೈಲ್ವೆ ಇಲಾಖೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡದ ರೈಲ್ವೆ ಇಲಾಖೆ ಅಧಿಕಾರಿಗಳು, ಕೂಡಲೇ ಪ್ರಾರ್ಥನಾ ಸ್ಥಳವನ್ನು ತೆರವುಗೊಳಿಸಲಾಗುವುದು ಎಂದು ಭರವಸೆ ನೀಡಿದರು.

Share Post