BengaluruPolitics

ಗುರುವಾರಕ್ಕೆ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು; ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವ – 2023 ರಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಗುರುವಾರ ಮಧ್ಯಾಹ್ನ 3.40ಕ್ಕೆ ಹುಬ್ಬಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ‌ ಮೋದಿ, 4 ಗಂಟೆಗೆ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.  ಸಂಜೆ 5.35 ಕ್ಕೆ ಹುಬ್ಬಳ್ಳಿಯಿಂದ ಮೋದಿ ಹೊರಡಲಿದ್ದಾರೆ.

ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ 5 ಲಕ್ಷ ಜನ ಸೇರುವ ನೀರಿಕ್ಷೆ ಇದೆ.  ಚುನಾವಣಾ ಸಮಯದಲ್ಲಿ ಸಾಲು ಸಾಲು ಕರ್ನಾಟಕ ಪ್ರವಾಸ ನಡೆಸುತ್ತಿರುವ ಪ್ರಧಾನಿ ಮೋದಿ, ಹಳೇ  ಮೈಸೂರು ಭಾಗ,ಕರವಾಳಿ ಭಾಗದ ಬಳಿಕ ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

 

Share Post