BengaluruCrime

ಪ್ರಿಂಟಿಂಗ್‌ ಪ್ರೆಸ್‌ಗೆ ಬೆಂಕಿ; ಆಗ್ನಿಶಾಮಕ ಸಿಬ್ಬಂದಿ ದೌಡು

ಬೆಂಗಳೂರು; ಬೆಂಗಳೂರಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುಮನಹಳ್ಳಿ ಬ್ರಿಡ್ಜ್‌ ಬಳಿ ಇರುವ ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post