BengaluruEconomy

ರೈತರ ಆದಾಯ ದ್ವಿಗುಣಗೊಳಿಸಲು ಆದ್ಯತೆ; ಬಜೆಟ್‌ ಬಗ್ಗೆ ಬಿಎಸ್‌ವೈ ಮೆಚ್ಚುಗೆ

ಬೆಂಗಳೂರು; ಸಿಎಂ ಬಸವರಾಜ ಬೊಮ್ಮಾಯಿಯವರು ಉತ್ತಮ ಬಜೆಟ್‌ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ನಂತರ ವಿಧಾನಸೌಧಲ್ಲಿ ಮಾತನಾಡಿದ ಅವರು, ಬಜೆಟ್‌ನಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ವರ್ಗದ ಜನರನ್ನೂ ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್‌ ಮಂಡಿಸಿದ್ದಾರೆ. ಅದರಲ್ಲೂ ರೈತರಿಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಈ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Share Post