ವಿಕಾಸಸೌಧದ ಮುಂದೆ ಕುಸಿದುಬಿದ್ದು ಖಾಸಗಿ ಕಂಪನಿ ಉದ್ಯೋಗಿ ಸಾವು!
ಬೆಂಗಳೂರು; ಖಾಸಗಿ ಕಂಪನಿ ಉದ್ಯೋಗಿಯೊಬ್ಬ ನಡುರಸ್ತೆಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ವಿಕಾಸಸೌಧದ ಮುಂಭಾಗ ನಡೆದಿದೆ. ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ದಿಢೀರ್ ಎಂದು ಕುಸಿದುಬಿದ್ದು ಸ್ಥಳದಲ್ಲೇ ಖಾಸಗಿ ಕಂಪನಿ ಉದ್ಯೋಗಿ ಪ್ರಾಣ ಬಿಟ್ಟಿದ್ದಾನೆ.
ಪಿ.ರವಿ ಎಂಬುವವರೇ ಸಾವನ್ನಪ್ಪಿದ ವ್ಯಕ್ತಿ. ಇವರು ಖಾಸಗಿ ಕಂಪನಿಯೊಂದರ ಐಡಿ ಕಾರ್ಡ್ ಹಾಕಿಕೊಂಡಿದ್ದರು. ಅದರ ಮೇಲೆ ಅಕೌಂಟ್ ಎಕ್ಸಿಕ್ಯೂಟಿವ್ ಎಂಬ ಡೆಸಿಗ್ನೇಷನ್ ಇದೆ. ವಿಕಾಸಸೌಧದ ಮುಂಭಾಗದಲ್ಲೇ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಧಾನಸೌಧ ಪೊಲೀಸರು, ವೈದ್ಯರನ್ನು ಕರೆಸಿ ಪರೀಕ್ಷೆ ಮಾಡಿಸಿದ್ದಾರೆ. ಆದ್ರೆ ರವಿ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ.