ಪ್ಯಾಲೆಸ್ತೀನಿ ಪರವಾಗಿ ಬೆಂಗಳೂರಲ್ಲಿ ಪ್ರತಿಭಟನೆ; ಎಫ್‌ಐಆರ್ ದಾಖಲು
ಬೆಂಗಳೂರು; ಇಸ್ರೇಲ್ ಹಾಗೂ ಪ್ಲ್ಯಾಲೆಸ್ತೇನ್ ನಡುವೆ ಯುದ್ಧ ನಡೆಯುತ್ತಿದೆ. ಭಾರತ ಇಸ್ರೇಲ್‌ಗೆ ಬೆಂಬಲ ಸೂಚಿಸಿದೆ. ಆದ್ರೆ ಬೆಂಗಳೂರಿನಲ್ಲಿ ಪ್ಯಾಲೇಸ್ತೇನ್ ಪರವಾಗಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಗಾಜಾ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಿಸಬೇಕು. ಭಾರತ ಇಸ್ರೇಲ್ ಮೇಲೆ ಒತ್ತಡ ಹಾಕಿ ಪ್ಯಾಲೆಸ್ತೀನ್‌ನ್ನು ಪ್ರತ್ಯೇಕ ದೇಶವಾಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಹಲವಾರು ಮಂದಿ ಪ್ರತಿಭಟನೆ ಮಾಡಿದ್ದಾರೆ.
ಯಾವುದೇ ಅನುಮತಿ ಪಡೆಯದೇ ಈ ಪ್ರತಿಭಟನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಹುತ್ವ ಕರ್ನಾಟಕ ಸಂಘಟನೆಯ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಾಗಿದೆ.