ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ; ಸಿಎಂ ಸಿದ್ದರಾಮಯ್ಯ
ಹಾಸನ; ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಲವತ್ತು ಪರ್ಸೆಂಟ್ ಕಮೀಷನ್ ಸೇರಿದಂತೆ ಹಲವು ಹಗರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 ಪರ್ಸೆಂಟ್ ಕಮಿಷನ್ ಹಗರಣ, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್‍ಕಾಯಿನ್ ಅವ್ಯವಹಾರ ಸೇರಿದಂತೆ ಹಲವು ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಡೆದ ದುರಂತ ಪ್ರಕರಣದ ಮರುತನಿಖೆ ನಡೆಸಲಾಗುತ್ತದೆ. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಸಿಎಂ ಸಿದ್ದರಾಮಯ್ಯ ಹೇಳಿದರು.