ಕೃಷಿ ತೋಟಗಾರಿಕೆಗೆ ಉತ್ತೇಜನ, ಯುವ ಕೌಶಲ್ಯಾಭಿವೃದ್ಧಿಗೆ ಒತ್ತು; ಸಿಎಂ ಸಿದ್ದರಾಮಯ್ಯ
ಬೆಂಗಳೂರು; ರಾಜ್ಯದಲ್ಲಿ ಹಲವು ಯೋಜನೆಗಳ ಮೂಲಕ ಉದ್ಯೋಗ ಸೃಷ್ಟಿಗೆ ನಾವು ಚಿಂತನೆ ನಡೆಸಿದ್ದೇವೆ. ಆ ನಿಟ್ಟಿನಲ್ಲಿ ನಾವು ಕ್ರಮ ತೆಗೆದುಕೊಂಡಿದ್ದೇವೆ. ಕೃಷಿ, ತೋಟಗಾರಿಕೆಗೆ ಉತ್ತೇಜನ ನೀಡುತ್ತಿದ್ದೇವೆ. ಅದಕ್ಕಾಗಿ ನಮ್ಮ ಸರ್ಕಾರ ಅನುದಾನ ಕೂಡಾ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹನ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಯುವಕರ ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಿ, ಉದ್ಯೋಗ ಸೃಷ್ಟಿ ಮಾಡುವುದು ನಮ್ಮ ಉದ್ದೇಶ. ಕೈಗಾರಿಕಾ ಕ್ಷೇತ್ರದಲ್ಲಿ ಮತ್ತಷ್ಟು ಬಲಗೊಳ್ಳಲು ತೀರ್ಮಾನ ಮಾಡಿದ್ದೇವೆ. ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ಯಮಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ.