ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ವಿರುದ್ಧ ಬೆಂಗಳೂರಿನಲ್ಲಿನ ಪ್ರತಿಭಟನೆ ನಡೆಸಯುತ್ತಿದೆ. ಸುಮಾರು 15ಕ್ಕೂ ಹೆಚ್ಚು ಸಂಘನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ. ದಲಿತ, ಇಸ್ಲಾಂ, ಕ್ರಿಶ್ಚಿಯನ್ ಸಂಘಟನೆಗಳು ಹೋರಾಟದಲ್ಲಿ ಭಾಗಿಯಾಗಿವೆ.
ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಫ್ರೀಡಂ ಪಾರ್ಕ್‌ವರೆಗೂ ಮೆರವಣಿಗೆ ಸಾಗಲಿದ್ದು, ಕಾಯ್ದೆ ವಾಪಸ್ ಪಡೆಯುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕಾಯ್ದೆ ನಮಗೆ ಅವಶ್ಯಕತೆಯಿಲ್ಲ ಮೊದಲು ಇದನ್ನು ವಾಪಸ್ ಪಡೆಯಿರಿ. ನೀತಿ ಗೆಟ್ಟ ಸರ್ಕಾರಕ್ಕೆ ನಮ್ಮ ಧಿಕ್ಕಾರ, ನಮಗೆ ನ್ಯಾಯ ಬೇಕೇ ಬೇಕು ಎಂದು ಘೋಷಣೆ ಕೂಗಿದ್ರು. ಎಲ್ಲಾ ಸಂಘಟನೆಗಳ ಮುಖ್ಯಸ್ಥರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಸಾವಿರಾರು ಜನ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.