BengaluruCrime

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ; ಬ್ಯಾಡರಹಳ್ಳಿ ಪಿಎಸ್‌ಐ ಹರೀಶ್‌ ಅರೆಸ್ಟ್‌

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂದ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯ ಪಿಎಸ್‌ಐ ಹರೀಶ್‌ ಬಂಧಿತ ಆರೋಪಿ. ಪೊಲೀಸ್‌ ಅಧಿಕಾರಿಯಾಗಿದ್ದುಕೊಂಡು, ಪಿಎಸ್‌ಐ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಪಿಎಸ್‌ಐ ಹರೀಶ್‌ ಅವರನ್ನು ಬಂಧಿಸಲಾಗಿದೆ.

ಬ್ಯಾಡರಹಳ್ಳಿ ಠಾಣೆ ಪಿಎಸ್‌ಐ ಹರೀಶ್‌ ಅವರು ನೇಮಕಾತಿ ವಿಭಾಗದ ಎಫ್‌ಡಿಎ ಒಬ್ಬರ ಜೊತೆ ಸಂಪರ್ಕ ಹೊಂದಿದ್ದರು. ಅಭ್ಯರ್ಥಿಗಳು ಹಾಗೂ ನೇಮಕಾತಿ ವಿಭಾಗದ ಅಧಿಕಾರಿ ಮಧ್ಯೆ ಮಧ್ಯವರ್ತಿಯಾಗಿ ಅವರು ಕೆಲಸ ಮಾಡಿದ್ದರು ಎನ್ನಲಾಗಿದೆ. ಬಂಧಿತರು ನೀಡಿದ ಮಾಹಿತಿ ಆಧರಿಸಿ ಪಿಎಸ್‌ಐ ಹರೀಶ್‌ರನ್ನು ಬಂಧಿಸಲಾಗಿದ್ದು, ಕೋರ್ಟ್‌ಗೆ ಹಾಜರುಪಡಿಸಲಾಗಿದೆ.

Share Post