BengaluruPolitics

ಬಿಜೆಪಿಯಲ್ಲಿ ಬಹಿರಂಗ ಹೇಳಿಕೆ ವಿಚಾರ; ಬಿಜೆಪಿ ನಾಯಕರ ಮಹತ್ವದ ಸಭೆ

ಬೆಂಗಳೂರು; ಚುನಾವಣೆಯಲ್ಲಿ ಸೋತ ಬಳಿಕ ಹಲವು ಬಿಜೆಪಿ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಸ್ವಪಕ್ಷದವರ ವಿರುದ್ಧವೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದನ್ನು ತಡೆಯುವುದಕ್ಕಾಗಿ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿವೆ.

ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಗೋವಿಂದ ಕಾರಜೋಳ, ಬಸನಗೌಡ ಪಾಟೀಲ್‌ ಯತ್ನಾಳ್‌, ಎ.ಎಸ್‌.ನಡಹಳ್ಳಿ, ಸಿ.ಟಿ.ರವಿ, ವೀರಣ್ಣ ಚರಂತಿಮಠ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಕೆಲ ನಾಯಕರು ಬಹಿರಂಗವಾಗಿ ಪಕ್ಷದ ಕೆಲವರ ವಿರುದ್ಧವೇ ಮಾತನಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಇದನ್ನು ತಡೆಯಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ.

Share Post