Bengaluru

ಜೂನ್‌ 3ನೇ ವಾರದಲ್ಲಿ ಪಿಯುಸಿ ಫಲಿತಾಂಶ; ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು; ನಿನ್ನೆಯಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ದ್ವಿತೀಯ ಪಿಯುಸಿ ಫಲಿತಾಂಶವನ್ನು ಜೂನ್ 3ನೇ ವಾರದಲ್ಲಿ ಪ್ರಕಟಿಸುವುದಾಗಿ ತಿಳಿಸಿದರು.

ಈ ಬಾರಿ ಪಿಯುಸಿ ಪರೀಕ್ಷೆಯನ್ನು ಒಟ್ಟು 6,84,255 ವಿದ್ಯಾರ್ಥಿಗಳು ಎದುರಿಸಿದ್ದಾರೆ.‌ ಇದರಲ್ಲಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು- 61,808, ಖಾಸಗಿ ವಿದ್ಯಾರ್ಥಿಗಳು – 21,928 ಜನ ಪರೀಕ್ಷೆ ಬರೆದಿದ್ದಾರೆ.

Share Post