ನವೆಂಬರ್ 1 ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರದಾನ; ಸಿಎಂ ಬೊಮ್ಮಾಯಿ
ಬೆಂಗಳೂರು; ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತವರ ನವೆಂಬರ್ 1ರಂದು ಕರ್ನಾಟಕ ರತ್ನ ಗೌರವವನ್ನು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು, ಈಗಾಗಲೇ ಪುನೀತ್ ನಮನ ಕಾರ್ಯಕ್ರಮದಲ್ಲಿ ಹೇಳಿದಂತೆ ಅವರಿಗೆ ಕರ್ನಾಟಕ ರತ್ನ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ನವೆಂಬರ್ 1 ರಂದು ಸಂಜೆ 4 ಗಂಟೆಗೆ ವಿಧಾನಸೌಧದ ಎದುರಿನ ಮೆಟ್ಟಿಲುಗಳ ಮೇಲೆ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಆ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.