ನಾಳೆ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರದಾನ; ಪುನೀತ್ ಕುಟುಂಬಕ್ಕೆ ಅಧಿಕೃತ ಆಹ್ವಾನ
ಬೆಂಗಳೂರು; ನಾಳೆ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮರಣೋತ್ತರವಾಗಿ ರಾಜ್ಯ ಸರ್ಕಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಇಂದು ಪುನೀತ್ ಕುಟುಂಬಕ್ಕೆ ಆಹ್ವಾನ ನೀಡಲಾಯಿತು. ಸಚಿವ ಆರ್.ಅಶೋಕ್ ಹಾಗೂ ಸುನಿಲ್ ಕುಮಾರ್ ಅವರು ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಆಹ್ವಾನಹ ನೀಡಿದರು.
ಈ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸುತ್ತಿದ್ದಾರೆ. ನಾಳೆ ಸಂಜೆ 4 ಗಂಟೆಗೆ ವಿಧಾನಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲಿಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆ ಸುಮಾರಿಗೆ ಪುನೀತ್ ರಾಜ್ ಕುಮಾರ್ ಅವರಿಗೆಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.