BengaluruCinemaHealth

ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ

ಬೆಂಗಳೂರು; ರಾಜ್ಯದಲ್ಲಿ ಬಜೆಟ್‌ನಲ್ಲಿ ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆಗೆ 6 ಕೋಟಿ ಮೀಸಲಿಡಲಾಗಿದೆ. ಈ ಹಣದಲ್ಲಿ ಹಠಾತ್‌ ಹೃದಯಾಘಾತ ತಪ್ಪಿಸಲು ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಇಡಿ ಯಂತ್ರ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಘಾತದಿಂದ ಸಣ್ಣವಯಸ್ಸಿಗೇ ಮೃತಪಟ್ಟಿದ್ದರು. ಹೀಗಾಗಿ ಹೃದಯಘಾತದ ಸಾವುಗಳನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ವ್ಯವಸ್ಥೆ ತರಲು ನಿರ್ಧರಿಸಿದೆ. ಇದಕ್ಕೆ ಪುನೀತ್‌ ರಾಜ್‌ಕುಮಾರ್‌ ಹೆಸರಿಡಲಾಗುತ್ತಿದೆ.

Share Post