BengaluruCrime

ಪ್ರವೀಣ್‌ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ; ಡಿ.ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು; ಪ್ರವೀಣ್‌ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಗೆ ತನಿಖೆ ಮಾಡಲು ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಪ್ರಕರಣದಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಪೊಲೀಸರು ಮುಕ್ತವಾಗಿ ಪ್ರಕರಣದ ತನಿಖೆ ನಡೆಸಬೇಕು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಾನು ಇಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಗೆ ಹೊರಡಬೇಕಿತ್ತು. ಆದ್ರೆ ಅಲ್ಲಿ ಪರಿಸ್ಥಿತಿ ಸರಿ ಇಲ್ಲ, ಬೇಡ ಎಂದು ಹೇಳಿದರು. ಹೀಗಾಗಿ ಸ್ವಲ್ಪ ದಿನ ಬಿಟ್ಟು ಹೋಗೋಣ ಎಂದುಕೊಂಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

 

Share Post