BengaluruPolitics

ವಿರೋಧ ಪಕ್ಷದ ನಾಯಕರಾಗಿ ಆರ್‌.ಅಶೋಕ್‌ ಆಯ್ಕೆ

ಬೆಂಗಳೂರು; ಕೊನೆಗೂ ವಿಪಕ್ಷ ನಾಯಕನ ಆಯ್ಕೆ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ನಿರೀಕ್ಷೆಯಂತೆ ಒಕ್ಕಲಿಗ ನಾಯಕನಿಗೆ ಅಧಿಕಾರ ನೀಡಲಾಗಿದೆ.

ಆರ್‌.ಅಶೋಕ್‌ ಅವರು ಬಿಜೆಪಿಗೆ ನಿಷ್ಠರಾಗಿದ್ದು ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಒಕ್ಕಲಿಗ ನಾಯಕರಾಗಿರುವ ಆರ್‌.ಅಶೋಕ್‌ ಅವರು, ಡಿಸಿಎಂ ಸೇರಿದಂತೆ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತರಿಗೆ ನೀಡಿದ್ದರಿಂದ ವಿಪಕ್ಷ ನಾಯಕನ ಸ್ಥಾನವನ್ನು ಒಕ್ಕಲಿಗರಿಗೆ ನೀಡಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿ, ಹಿರಿಯ ನಾಯಕ ಆರ್‌.ಅಶೋಕ್‌ಗೆ ಮಣೆ ಹಾಕಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

Share Post