ಕುಟುಂಬದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್; 30 ಸಾವಿರ ಲೈಕ್ಸ್
ಬೆಂಗಳೂರು; ನಟಿ ರಾಧಿಕಾ ಪಂಡಿತ್ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ತನ್ನ ಕುಟುಂದ ಫೋಟೊವನ್ನು ಹಂಚಿಕೊಂಡಿದ್ದಾರೆ. ಇಬ್ಬರು ಮಕ್ಕಳೊಂದಿಗೆ ರಾಧಿಕಾ ಹಾಗೂ ಯಶ್ ಫೊಟೋ ತೆಗೆಸಿಕೊಂಡಿದ್ದು, ಆ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಮಂದಿ ಲೈಕ್ಸ್ ಕೊಟ್ಟಿದ್ದಾರೆ.
ಸದ್ಯ ನಟನೆಯಿಂದ ದೂರ ಉಳಿದಿರುವ ರಾಧಿಕಾ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಮಕ್ಕಳಾದ ಐರಾ, ಯಥರ್ವ್ ಹಾಗೂ ಪತಿ ಯಶ್ ಜೊತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ರಾಧಿಕಾ, ಪದೇ ಪದೇ ಯಶ್ ಮತ್ತು ಮಕ್ಕಳ ಜೊತೆಗಿನ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.
ಯಶ್, ರಾಧಿಕಾ ಕುಟುಂಬ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದಲ್ಲಿ ರಾಧಿಕಾ ನಟಿಸಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ಚಿತ್ರ ಒಪ್ಪಿಕೊಂಡಿಲ್ಲ. ಯಶ್ ಅವರ ಕೆ.ಜಿ.ಎಫ್–2 ಸಿನಿಮಾ ಭಾರತೀಯ ಸಿನಿಮಾ ಇತಿಹಾಸದಲ್ಲೇ ದಾಖಲೆಯ ಗಳಿಕೆ ಕಂಡಿದೆ.