ನಿಮ್ಮನ್ನು ನೀವು ಎಷ್ಟು ಪ್ರೀತಿಸುತ್ತೀರೋ ಅಷ್ಟು ಸುಂದರವಾಗಿರುತ್ತೀರಿ; ರಾಧಿಕಾ ಪಂಡಿತ್
ಬೆಂಗಳೂರು: ನಿಮ್ಮನ್ನು ನೀವು ಎಷ್ಟು ಪ್ರೀತಿಸುತ್ತೀರೋ ಅಷ್ಟು ಸುಂದರವಾಗುತ್ತೀರಿ. ಎಲ್ಲರಿಗೂ ವಾರಾಂತ್ಯದ ಶುಭಾಶಯಗಳು ಎಂದು ನಟಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ.
ಹೌದು, ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಕ್ಕಳಾದ ಮೇಲೆ ನಟನೆಯಿಂದ ದೂರ ಉಳಿದಿರುವ ರಾಧಿಕಾ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದು, ಮಕ್ಕಳಾದ ಐರಾ ಮತ್ತು ಯಥರ್ವ್ ಜೊತೆ ಬ್ಯುಸಿ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ರಾಧಿಕಾ, ಯಶ್ ಮತ್ತು ಮಕ್ಕಳ ಜೊತೆಗಿನ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.