150 ಸ್ಥಾನಕ್ಕಿಂತ ಕಡಿಮೆ ಬರಬಾರದು; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೋಮುವಾದ ಮತ್ತು ದ್ವೇಷದ ರಾಜಕಾರಣದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಿರಂತರವಾಗಿ ಹೋರಾಟ ನಡೆಸಬೇಕು ಎಂದರು.
ಮುಂದಿನ ಚುನಾವಣೆಯಲ್ಲಿ 150ಕ್ಕಿಂತ ಒಂದು ಸ್ಥಾನವೂ ಕಡಿಮೆಯಾಗಬಾರದು. ಅದನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ಪಕ್ಷ ಸಂಘಟನೆ ಮಾಡಬೇಕು. ಪಕ್ಷದ ಸಂಘಟನೆಗೆ ಕೆಲಸ ಮಾಡುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಲಾಗುತ್ತದೆ ಎಂದು ರಾಹುಲ್ ಇದೇ ವೇಳೆ ಹೇಳಿದರು. ಅಧಿಕಾರಕ್ಕೆ ಬಂದ ನಂತರವೂ ಪಕ್ಷಕ್ಕೆ ರಕ್ತ ಬಸಿಯುವವರಿಗೆ ಆದ್ಯತೆ ನೀಡಲಾಗುವುದು ಎಂದು ರಾಹುಲ್ ಗಾಂಧಿ, ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ. ಇದು ಶೇ. 40ರ ಕಮಿಷನ್ ಪಡೆಯುವ ಸರ್ಕಾರ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ವಿರುದ್ಧ ಸದಾ ಮಾತನಾಡುತ್ತಾರೆ. ಈಗ ಅವರು ಕರ್ನಾಟಕಕ್ಕೆ ಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಎಲ್ಲರೂ ನಗುತ್ತಾರೆ ಎಂದು ಲೇವಡಿ ಮಾಡಿದರು.