Bengaluru

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯ ಸಿಂಚನ; ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ

ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಕೆಲವೊಂದು ಕಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿದೆ. ಇದೀಗ ಹವಾಮಾನ ಇಲಾಖೆ ಪ್ರಕಾರ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯ ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

   ಹವಾಮಾನ ಇಲಾಖೆ ಹೇಳಿಕೆ ಪ್ರಕಾರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 22ರಿಂದ 24ರ ವರೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗಲಿದೆ. ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ಮಾರ್ಚ್ 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share Post