Bengaluru

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಸಿಂಚನ

ಬೆಂಗಳೂರು; ರಾಜ್ಯದಲ್ಲಿ ಕೆಲದಿನಗಳಿಂದ ಮಳೆಯಾಗುತ್ತಿದೆ. ಆದ್ರೆ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

 ರಾಜ್ಯ ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಕೋಲಾರ ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಗೂ ಚಿಕ್ಕಬಳ್ಳಾಪುರದಲ್ಲಿ ಹೆಚ್ಚು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share Post