BengaluruDistricts

ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಬಂಗಾಳಕೊಲ್ಲಿ ಮತ್ತು ಅರಬೀ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಶೀತಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಲಿದೆ ಎಂದು ಹವಾಮಾನ ತಙ್ಞರು ತಿಳಿಸಿದ್ದಾರೆ.

Share Post