BengaluruCinema

ಪುನೀತ್‌ಗೆ ಕರ್ನಾಟಕ ರತ್ನ ಗೌರವ ಪ್ರದಾನ ಹಿನ್ನೆಲೆ; ರಜನಿಕಾಂತ್‌ ಆಗಮನ

ಬೆಂಗಳೂರು; ಇಂದು ಮರಣೋತ್ತರವಾಗಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಗೌರವ ನೀಡಲಾಗುತ್ತಿದೆ. ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಸೂಪರ್‌ ರಜಿನಿಕಾಂತ್‌ ಆಗಮಿಸಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಆತ್ಮೀಯವಾಗಿ ಬರಮಾಡಿಕೊಂಡರು.

ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಮಾರಂಭದಲ್ಲಿ ರಜನಿಕಾಂತ್ ಅವರು ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ‌.

Share Post