ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಕೇಸ್; ಬುದ್ಧಿಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ – ಆರಗ ಪ್ರಶ್ನೆ
ಬೆಂಗಳೂರು; ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಬಗ್ಗೆ ಮಾತನಾಡಲು ಬುದ್ಧಿಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಕನ್ಹಯ್ಯ ಲಾಲ್ ಕೊಲೆ ಮಾಡುವ ದೃಶ್ಯ ನೋಡಿದ್ದೇನೆ. ಅತ್ಯಂತ ಕ್ರೂರ ಹಾಗೂ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ ಎಂದು ಹೇಳಿದರು.
ಈ ರೀತಿಯ ರಾಕ್ಷಸಿ ಪೈಶಾಚಿಕ ಕೃತ್ಯ ಮಾಡುವಂತವರಿಗೆ ಕಠಿಣ ಶಿಕ್ಷೆ ಕೊಡಿಸಲು ಸಾಧ್ಯ ಆಗುತ್ತೆ. ಅದನ್ನು ಯೋಚನೆ ಮಾಡಬೇಕು. ಕಾಂಗ್ರೆಸ್‍ನ ರಾಜಸ್ಥಾನ ಸರ್ಕಾರ ಇದಕ್ಕೆ ಖಂಡಿತವಾಗಿ ಉತ್ತರಕೊಡಬೇಕು. ಈ ವ್ಯಕ್ತಿಗಳು ರಾಜ್ಯದಲ್ಲಿ ಬೆಳೆದಿದ್ದಾರೆ. ಆ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.