BengaluruCinemaPolitics

ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿದ ರಾಜ್ಯಸಭಾ ಸದಸ್ಯ ಜಗ್ಗೇಶ್‌ ದಂಪತಿ

ಬೆಂಗಳೂರು; ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್‌ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅವರ ಪತ್ನಿ ಪರಿಮಳಾ ಕೂಡಾ ಜೊತೆಗಿದ್ದರು. 

 

ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ದಂಪತಿ​​​ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಇದೇ ವೇಳೆ ಮಾತನಾಡಿರುವ ಜಗ್ಗೇಶ್‌, ಡಿ.ಕೆ.ಶಿವಕುಮಾರ್‌ ಅವರು ನನ್ನ ಸ್ನೇಹಿತರು. ಹೀಗಾಗಿ ಅಭಿನಂದನೆ ಸಲ್ಲಿಸಲು ಬಂದಿದ್ದೇವೆ ಎಂದು ಹೇಳಿದ್ದಾರೆ.

Share Post