Bengaluru

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿಗಳು

ಬೆಂಗಳೂರು; ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಜೈರಾಮ್‌ ರಮೇಶ್‌ ಹಾಗೂ ಮನ್ಸೂರ್‌ ಅಲಿ ಖಾನ್‌ ಇಂದು ನಾಮಪತ್ರ ಸಲ್ಲಿಸಿದರು. ಇಬ್ಬರೂ ನಾಯಕರು ವಿಧಾನಸೌಧದಲ್ಲಿ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಕಾಂಗ್ರೆಸ್‌ ಬಿ ಫಾರ್ಮ್‌ನೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿ ಹಲವು ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಇಬ್ಬರೂ ಅಭ್ಯರ್ಥಿಗಳು ವಿಧಾನಸೌಧದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಂದ ಪಕ್ಷದ ಬಿ ಫಾರ್ಮ್‌ ಪಡೆದುಕೊಂಡರು.

 

Share Post