BengaluruPolitics

ಬಿಡಿಎ ಅಧ್ಯಕ್ಷರಾಗಿ ರಾಕೇಶ್‌ ಸಿಂಗ್‌ ನೇಮಕ; ಲಾಬಿ ನಡೆಸಿದ್ದ ಶಾಸಕರಿಗೆ ನಿರಾಸೆ

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರಾಕೇಶ್‌ ಸಿಂಗ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಕೇಶ್‌ ಸಿಂಗ್‌ ಐಎಎಸ್‌ ಅಧಿಕಾರಿಯಾಗಿದ್ದು, ಈ ಸ್ಥಾನಕ್ಕೆ ಅಧಿಕಾರಿಯನ್ನು ನೇಮಕ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಜೊತೆಗೆ ಬಿಡಿಎ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಹಲವು ಶಾಸಕರಿಗೆ ನಿರಾಸೆಯಾಗಿದೆ.

ಹಿರಿಯ ಶಾಸಕರಾದ ಎನ್‌.ಎ.ಹ್ಯಾರಿಸ್‌, ಎನ್‌.ಕೃಷ್ಣಪ್ಪ ಹಾಗೂ ಟಿ.ಬಿ.ಜಯಚಂದ್ರ ಅವರು ಬಿಡಿಎ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಸಚಿವ ಸ್ಥಾನ ಬಯಸಿದ್ದ ಇವರಿಗೆ ಸಚಿವಗಿರಿ ಸಿಕ್ಕಿರಲಿಲ್ಲ. ಹೀಗಾಗಿ ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ಆದ್ರೆ ರಾಜ್ಯ ಸರ್ಕಾರ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ಗೆ ಈ ಹುದ್ದೆ ನೀಡಿ ಆದೇಶ ಹೊರಡಿಸಿದೆ.

Share Post