BengaluruDistricts

ರಮೇಶ್‌ ಅರವಿಂದ್‌ ಸೇರಿ ಮೂವರಿಗೆ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌

ಬೆಳಗಾವಿ; ಖ್ಯಾತ ನಟ, ನಿರೂಪಕ ರಮೇಶ್ ಅರವಿಂದ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್  ನೀಡಲು ನಿರ್ಧರಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ.

Share Post