BengaluruPolitics

ಪ್ರವಾಹ ಸಂತ್ರಸ್ತರಿಗೆ 5 ರಿಂದ 15 ಲಕ್ಷ ರೂ. ಪರಿಹಾರ ನೀಡಿ; ಡಿಕೆಶಿ ಆಗ್ರಹ

ಬೆಂಗಳೂರು; ನಗರದಲ್ಲಿನ ಪರಿಸ್ಥಿತಿ, ಇದಕ್ಕೆ ಕಾರಣ, ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು. ಈ ಸಮಿತಿ 15 ದಿನಗಳಲ್ಲಿ ವರದಿ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಪಕ್ಷದ ನಾಯಕರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ತಕ್ಷಣ ಪರಿಹಾರ ನೀಡಬೇಕು. ವಾಹನ, ಆಸ್ತಿ ನಷ್ಟ ಕುರಿತು ಸರ್ಕಾರ ತಕ್ಷಣ ಸಮೀಕ್ಷೆ ನಡೆಸಬೇಕು. 5 ಲಕ್ಷದಿಂದ 25 ಲಕ್ಷ ರೂಪಾಯಿವರೆಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು, ಬೆಂಗಳೂರು ನಗರದ ಸದ್ಯದ ಸ್ಥಿತಿ ಮತ್ತು ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಸರ್ಕಾರ‌ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು. ಬೆಂಗಳೂರು ನಗರ ಹಿಂದೆಂದೂ ಕಾಣದಂತಹ ಸಮಸ್ಯೆಗೆ‌ ಸಿಲುಕಿದೆ. ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಸರ್ಕಾರ ಏನು ಮಾಡಿದೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಶಾಸಕ ಕೆ.ಜೆ. ಜಾರ್ಜ್, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಉಪಸ್ಥಿತರಿದ್ದರು.

Share Post