545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ; ಚಾರ್ಜ್‌ಶೀಟ್ ಸಲ್ಲಿಸಿದ ಸಿಐಡಿ ಅಧಿಕಾರಿಗಳು
ಬೆಂಗಳೂರು; 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಂದು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 3065 ಪುಟಗಳ ಶಾರ್ಜ್‌ಶೀಟ್‌ನ್ನು ಸಿಐಡಿ ಅಧಿಕಾರಿಗಳು ಒಂದನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.
ಪಿಎಸ್‌ಐ ಪರೀಕ್ಷೆ ಬರೆದ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಒಎಂಆರ್ ಶೀಟ್‌ಗಳನ್ನು ತಿದ್ದಲಾಗಿತ್ತು. ಈ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ತನಿಖೆಯಲ್ಲಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ಕೂಡಾ ಬಂಧನದಲ್ಲಿದ್ದಾರೆ. ಶಾರರ್ಜ್ ಶೀಟ್‌ನಲ್ಲಿ 30 ಆರೋಪಿಗಳ ಹೆಸರುಗಳನ್ನು ಪ್ರಸ್ತಾಪಿಸಲಾಗಿದ್ದು, ಅವರು ಈ ಪ್ರಕರಣದಲ್ಲಿ ಯಾವ ರೀತಿಯಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ವಿವರಿಸಲಾಗಿದೆ.