ಶಿಕ್ಷಕರ ನೇಮಕಾತಿ ವಯೋಮಿತಿಯಲ್ಲಿ ಸಡಿಲಿಕೆ; ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು; ಶಿಕ್ಷಕರ ನೇಮಕಾತಿಗೆ ಹೊಸ ನಿಯಮಾವಳಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ನಿರ್ಧಾರ ಮಾಡಲಾಗಿದ್ದು, ಎಲ್ಲಾ ವರ್ಗಗಳಿಗೂ ವಯೋಮಿತಿಯಲ್ಲಿ ಸಡಲಿಕೆ ಸಿಗಲಿದೆ.
ಎಲ್ಲಾ ವರ್ಗಗಳಿಗೂ ಎರಡು ವರ್ಷಗಳ ಸಡಿಲಿಕೆ ನೀಡಲಾಗಿದೆ. ಎಸ್ಸಿ, ಎಸ್ಟಿ, ಪ್ರವರ್ಗ-೧ಕ್ಕೆ 47 ವರ್ಷಗಳವರೆಗೆ ವಯೋಮಿತಿ ನಿಗದಿ ಮಾಡಲಾಗಿದೆ. ಇತರೆ ಹಿಂದುಳಿದ ವರ್ಗಗಳಿಗೆ 45 ಹಾಗೂ ಸಾಮಾನ್ಯ ವರ್ಗಕ್ಕೆ 42 ವರ್ಷಕ್ಕೆ ಸಡಿಲಿಕೆ ಮಾಡಲಾಗಿದೆ.