Bengaluru

HARSHA MURDER CASE: ಹರ್ಷ ಕೊಲೆ ಹಿಂದೆ ಕಾಂಗ್ರೆಸ್‌ ಕೈವಾಡ; ರೇಣುಕಾಚಾರ್ಯ ಆರೋಪ

ಬೆಂಗಳೂರು: ಶಿವಮೊಗ್ಗದ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಖಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು. ಇದಕ್ಕಾಗಿ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ 15ಕ್ಕೂ ಹೆಚ್ಚು ಮಂದಿಯ ಕೊಲೆಯಾಗಿದೆ. ಹೀಗಾಗಿ ಈ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ರೇಣುಕಾಚಾರ್ಯ ಹೇಳಿದ್ದಾರೆ.

 

 

 

Share Post