BengaluruHealth

ಎಸ್‌.ಎಂ.ಕೃಷ್ಣ ಸಂಪೂರ್ಣ ಗುಣಮುಖ; ಡಿಸ್‌ಚಾರ್ಜ್‌

ಬೆಂಗಳೂರು; ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ಸಂಪೂರ್ಣ ಗುಣಮುಖರಾಗಿದ್ದು, ಮನೆಗೆ ಮರಳಿದ್ದಾರೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಸ್​.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ, ಅವರನ್ನು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಜ್ವರ ಹೆಚ್ಚಾಗಿದ್ದ ಹಿನ್ನೆಲೆ ಸೆಂ.24ರಂದು ರಾತ್ರಿ ಹಳೇ ಮದ್ರಾಸ್​ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Share Post