Bengaluru

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ; ರೋಹಿತ್‌ ಚಕ್ರತೀರ್ಥ ಕೈಬಿಟ್ಟ ಸರ್ಕಾರ

ಬೆಂಗಳೂರು; ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್‌ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಪಠ್ಯ ಪರಿಷ್ಕರಣೆಗೆ ರೋಹಿತ್‌ ಚಕ್ರತೀರ್ಥ ಅವರನ್ನು ಈ ಮೊದಲ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್‌ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ ೪.೨ರ ಹೊಸ ಧರ್ಮಗಳ ಉದಯ ಪಠ್ಯ ಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಬವಾಬ್ದಾರಿಯನ್ನು ರೋಹಿತ್‌ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

 

Share Post