ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಬಸವರಾಜ ಬೊಮ್ಮಾಯಿ
ಬೆಂಗಳೂರು; ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂಪಾಯಿಗಳನ್ನು ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. ಭಿಕ್ಷೆ ಬೇಡಿ ಮಕ್ಕಳಿಗೆ ಶೂ, ಸಾಕ್ಸ್ ಕೊಡಿಸುತ್ತೇವೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು. ಆ ಹಣ ಎಲ್ಲಿ ಎಂದು ಕೇಳಿದರು.