BengaluruCrime

ಶಾಂತಿನಗರ ಬಸ್‌ ನಿಲ್ದಾಣದಲ್ಲಿ ದಾಖಲೆ ಇಲ್ಲದ 76 ಲಕ್ಷ ನಗದು ವಶ..!

ಬೆಂಗಳೂರು; ದಾಖಲೆಯಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 76 ಲಕ್ಷ  ರೂಪಾಯಿ ನಗದನ್ನು ಸಿಸಿಬಿ ಪೊಲೀಸರು ಕಳೆದ ರಾತ್ರಿ ಬೆಂಗಳೂರಿನಲ್ಲಿ ವಶಪಡಿಸಿಕೊಂಡಿದ್ದಾರೆ. 

ಮಂಗಳವಾರ ರಾತ್ರಿ 76 ಲಕ್ಷ ರೂಪಾಯಿ ನಗದಿನೊಂದಿಗೆ ಇಬ್ಬರು ವ್ಯಕ್ತಿಗಳು ಶಾಂತಿ ನಗರ ಬಸ್‌ ನಿಲ್ದಾಣದಲ್ಲಿ ನಿಂತುಕೊಂಡಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಸಿಸಿಬಿ ಅಧಿಕಾರಿಗಳು, ಆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರ ಬಳಿ ಇದ್ದ ಬ್ಯಾಗ್‌ನಲ್ಲಿ 76 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಹಣದ ಮೂಲದ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.

Share Post